ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹಿಜಾಬ್ ವಿವಾದ ಇದೊಂದು ಸೂಕ್ಷ್ಮವಾದ ವಿಚಾರ. ಯಾರೂ ಕೂಡ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು, ವಿದ್ಯಾರ್ಥಿಗಳು ಸೌಹಾರ್ದತೆಯನ್ನು ಪಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಕೋರ್ಟ್ ತೀರ್ಪು ಬರುವವರೆಗೆ ಎಲ್ಲರೂ ತಾಳ್ಮೆಯಿಂದ ಇರಬೇಕು. ವಿದ್ಯಾರ್ಥಿಗಳು ಸೌಹಾರ್ದತೆಯಿಂದ ಇದ್ದು, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದರು.
ಹೈಕೋರ್ಟ್ ತೀರ್ಪಿನ ಬಳಿಕ ಹಿಜಾಬ್ ವಿವಾದಕ್ಕೂ ಪರಿಹಾರ ಸಿಗುವ ವಿಶ್ವಾಸವಿದೆ. ಪ್ರಚೋದಿಸುವ ಕೆಲಸ ಯಾರೂ ಕೂಡ ಮಾಡಬಾರದು ಎಂದು ಹೇಳಿದರು.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಜಾಬ್, ಕೇಸರಿ ಶಾಲು ಗಲಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಯಾವ ಜಿಲ್ಲೆಗಳಲ್ಲಿ ಗಲಭೆ, ಗಲಾಟೆ ನಡೆದಿದೆಯೋ ಆಯಾ ಸ್ಥಳಗಳಲ್ಲಿ ಕಾಲೇಜು ಬಂದ್ ಮಾಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಶಾಲೆ, ಕಾಲೇಜು ಬಂದ್: ಇಂದು ರಾತ್ರಿಯೇ ನಿರ್ಧಾರ – CM
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ