Latest

ರಾಜ್ಯಾದ್ಯಂತ 3 ದಿನ ಶಾಲಾ-ಕಾಲೇಜು ರಜೆ ಘೋಷಣೆ

ಬೆಂಗಳೂರು: ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯದಲ್ಲಿ ತಾರಕಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ವಿವಾದ ಕೋರ್ಟ್ ಮೆಟ್ತಿಲೇರಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆಯಿಂದ ಹೈಸ್ಕೂಲ್, ಕಾಲೇಜು, ಪದವಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button