ಪ್ರಗತಿವಾಹಿನಿ ಸುದ್ದಿ, ನವದೆಹಲಿ – ರಾಜ್ಯಾದ್ಯಂತ 3 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸಪ್ ಗ್ರುಪ್ ನಲ್ಲಿ ಹಾಕಲಾಗಿದ್ದ ಸಂದೇಶವನ್ನು ಕೆಲವೇ ಕ್ಷಣಗಳಲ್ಲಿ ಡಿಲೀಟ್ ಮಾಡಿ ಹೊಸ ಸಂದೇಶ ಹಾಕಲಾಗಿದೆ.
ಮೊದಲು ಶಾಲೆ, ಕಾಲೇಜುಗಳಿಗೆ ರಜೆ ಎಂದಿದ್ದಿದ್ದನ್ನು ಬದಲಾಯಿಸಿ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಎಂದು ತಿದ್ದುಪಡಿ ಮಾಡಲಾಗಿದೆ. ಸಂದೇಶದಲ್ಲಿ ಪ್ರಾಥಮಿಕ ಶಾಲೆಗಳನ್ನು ತೆಗೆಯಲಾಗಿದೆ.
ಆದರೆ ಅಷ್ಟರೊಳಗೆ ಮುಖ್ಯಮಂತ್ರಿಗಳ ಸಂದೇಶ ರಾಜ್ಯಾದ್ಯಂತ ಎಲ್ಲ ಮಾಧ್ಯಮಗಳಲ್ಲಿ ಭಿತ್ತರವಾಗಿದೆ.
ತನ್ಮೂಲಕ ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿದೆ.
ಮೊದಲು ಬಂದ್ ಮೆಸೇಜ್ –
ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸಿಎಂ ಬೊಮ್ಮಾಯಿ
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ
ಸಂಬಂಧಿಸಿದ ಎಲ್ಲರೂ ಸಹಕರಿಸಿ
ಎಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ
ನಂತರ ಬಂದ ಮೆಸೇಜ್ –
ಮೂರು ದಿನಗಳ ಕಾಲ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸಿಎಂ ಬೊಮ್ಮಾಯಿ
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ
ಸಂಬಂಧಿಸಿದ ಎಲ್ಲರೂ ಸಹಕರಿಸಿ
ಎಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಶಾಲೆ, ಕಾಲೇಜು ಬಂದ್: ಇಂದು ರಾತ್ರಿಯೇ ನಿರ್ಧಾರ – CM
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ