ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿರೋಧಿಸಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವ್ಯಾಪಾರಿಯೋರ್ವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸತೀಶ್ ಎನ್ನುವ ವ್ಯಾಪಾರಿ ಬುಧವಾರ ಸಂಜೆ 7 ಗಂಟೆಗೆ ಅಸ್ವಸ್ಥರಾಗಿದ್ದು ತಕ್ಷಣ ಅವರನ್ನು ಅಂಬುಲನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಒಂದು ವಾರದಿಂದ ಪ್ರತಿಭಟನೆ, 3 ದಿನದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ರೈತ ಸಂಘಟನೆ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಸಹ ಉಪವಾಸ ಸತ್ಯಾಗ್ರಹ ನಿರತರಾಗಿದ್ದು, ಪ್ರತಿಭಟನೆಯನ್ನು ಇನ್ನಷ್ಟು ಉಗ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ, ಬುಧವಾರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಸಹ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ.
ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ವಿವಾದ: ಸಿದ್ದರಾಮಯ್ಯ ಬಳಿ ನಿಯೋಗ ಒಯ್ಯಲಾಗುವುದು ಎಂದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ