Kannada NewsLatest

ಗೋಕಾಕ್ ಗೆ ತೆರಳುತ್ತಿದ್ದ ಬಸ್ ಪಲ್ಟಿ; ಚಾಲಕ ಸೇರಿ ಇಬ್ಬರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಖಾಸಗಿ ಬಸ್ ಬ್ರಿಡ್ಜ್ ಮೇಲಿಂದ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ದೇವಗಿರಿ ಗ್ರಾಮದ ಬಳಿ ನಡೆದಿದೆ.

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು,  ಬಸ್ ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆ ಗೋಕಾಕ್ ಗೆ ತೆರಳುತ್ತಿತ್ತು. ಈ ವೇಳೆ ದೇವರಗಿ ಗ್ರಾಮದ ಬಳಿ ಬಸ್ ತೆರಳುತ್ತಿದ್ದಾಗ ಬ್ರಿಡ್ಜ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ.

Home add -Advt

ಅಪಘಾತದಲ್ಲಿ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದು, 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸ್ ನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕ್ರೇನ್ ಬಳಸಿ ಮೇಲಕ್ಕೆತ್ತಿದ್ದಾರೆ.
ಹಿಜಾಬ್ ವಿವಾದ; ಮುಸ್ಕಾನ್ ಳಿಗೆ ಮಹಾರಾಷ್ಟ್ರ ಶಾಸಕರಿಂದ ಭರ್ಜರಿ ಗಿಫ್ಟ್

Related Articles

Back to top button