Kannada NewsKarnataka NewsLatest

ನಂದಿಹಳ್ಳಿಯಲ್ಲಿ 1.07 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ನಂದಿಹಳ್ಳಿಯಲ್ಲಿ  1.07 ಕೋಟಿ ರೂ. ವೆಚ್ಚದಲ್ಲಿ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸಂಜೆ ಚಾಲನೆ ನೀಡಿದರು.
​  ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ‌ ನಿರ್ಮಾಣದ ಕಾಮಗಾರಿ​, ಪಂಚಾಯತ ರಾ​ಜ್​ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ​, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿ​ಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
 ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಕಮೀಟಿಯವರಿಗೆ 7 ಲಕ್ಷ ರೂ,ಗಳ ಚೆಕ್​ ನ್ನು ಈ ಸಂದರ್ಭದಲ್ಲಿ​ ಹಸ್ತಾಂತ​ರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯ​ನ್ನು ಸಹ​ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯುವರಾಜ​ ಕದಂ,​ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳು, ಸಂಜು ಮಾದರ, ಸಾತೇರಿ ಬೆಳವತ್ಕರ್, ಜಿ ಕೆ ಪಾಟೀಲ, ನಿಂಗವ್ವ ಕುರುಬರ, ಮಹಾದೇವ ಜಾಧವ್, ರಾಮದಾಸ ಜಾಧವ್, ಸಹದೇವ ಬೆಳಗಾವ್ಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button