Latest

ಹಿಜಾಬ್ ವಿವಾದ; ಇಂದೇ ಹೊರಬೀಳುತ್ತಾ ಹೈಕೋರ್ಟ್ ತೀರ್ಪು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಸ್ತೃತ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭಗೊಂಡಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ 6 ರಿಟ್ ಅರ್ಜಿ, ಕೆಲ ಮಧ್ಯಂತರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಲಿದೆ. ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತು ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ತಿಳಿಸಿತ್ತು. ಅಲ್ಲದೇ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಹೈಕೋರ್ಟ್ ಮಧ್ಯಂತರ ಆದೇಶದ ಬೆನ್ನಲ್ಲೇ ಪೊಲೀಸ್ ಭದ್ರತೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭಗೊಂಡಿದ್ದವು. ಇದೀಗ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಜೆ.ಎಂ.ಖಾಜಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಹಿಜಾಬ್ ವಿವಾದ ಕುರಿತು ಇಂದೇ ಹೈಕೋರ್ಟ್ ತೀರ್ಪು ಹೊರಬೀಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button