ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ಬರಿ ಸುಳ್ಳೇ ತುಂಬಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಸುಳ್ಳು ಹೇಳಿಸಿದೆ. ರಾಜ್ಯಪಾಲರಿಗೆ ಭಾಷಣ ಬರೆದುಕೊಡುವುದು ಪದ್ಧತಿ. 116 ಪ್ಯಾರಗಳ ಭಾಷಣದಲ್ಲಿ ಬಹುತೇಕ ಸುಳ್ಳೇ ಇದೆ. ಕೋವಿಡ್ ಸಾವಿನ ಲೆಕ್ಕ ಕೂಡ ತಪ್ಪು ನೀಡಿದ್ದಾರೆ. ನನ್ನ ಪ್ರಕಾರ 4 ಲಕ್ಷ ಜನ ಕೊರೊನಾಗೆ ಬಲಿಯಾಗಿದ್ದಾರೆ. ಆದರೆ ಸರ್ಕಾರ ನೀಡಿರುವ ಮಾಹಿತಿ ತಪ್ಪು. ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆಯಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ ಶುರು ಮಾಡಿದ್ದೇ ಬಿಜೆಪಿಯವರು. ಮಕ್ಕಳಿಗೆ ಕೇಸರಿ ಶಾಲು ಹಾಕಿ ಕಳುಹಿಸಿದ್ದು ಇವರೇ. ಈಗ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇನ್ನು ಸಚಿವ ಈಶ್ವರಪ್ಪ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ. ಸಚಿವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಿಜಾಬ್ ವಿವಾದ; ಇಂದೇ ಹೊರಬೀಳುತ್ತಾ ಹೈಕೋರ್ಟ್ ತೀರ್ಪು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ