ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿಕೆ ಮಾಡಿದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿತು.
ಈ ನಡುವೆ ಹಿಜಾಬ್ ಕುರಿತು 9 ಅರ್ಜಿಗಳು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದು, ಹಲವು ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದಾರೆ. ಅಲ್ಲದೇ ಹಿಜಾಬ್ ಕುರಿತು ಮೊದಲು ಹೈಕೋರ್ಟ್ ಗೆ ಅರ್ಜಿಸಲ್ಲಿಸಿದ್ದ ಯುವತಿ ಇದೀಗ ಎರಡನೇ ಅರ್ಜಿಯನ್ನು ಸಲ್ಲಿಸಿದ್ದು, ಮೊದಲ ಅರ್ಜಿ ಬಗ್ಗೆ ಯುವತಿ ಪರವಾಗಿ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸುತ್ತಿದ್ದರೆ, ಎರಡನೇ ಅರ್ಜಿ ಕುರಿತು ಯುವತಿ ಪರವಾಗಿ ವಕೀಲ ರವಿವರ್ಮಕುಮಾರ್ ವಾದ ಮಂಡಿಸಲಿದ್ದಾರೆ.
ಇಂದು ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯಪೀಠ, ಕಾಲೇಜು ಅಭಿವೃದ್ಧಿ ಸಮಿತಿಗೆ ಕಾಯ್ದೆಯಡಿ ಅಧಿಕಾರವಿಲ್ಲ. ಹೀಗಾಗಿ ಸಮವಸ್ತ್ರ ಜಾರಿ ಅಧಿಕಾರ ಸಮಿತಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಮುಸ್ಲೀಂ ಪುರುಷರು ಏನು ಮಾಡುತ್ತಾರೋ ಎಂಬ ಭಯ, ರಕ್ಷಣೆ ಪಡೆಯಲು ಮಹಿಳೆಯರು ಬುರ್ಖಾ ಧರಿಸುತ್ತಾರೆ; ಆರ್.ಎಸ್.ಎಸ್ ಮುಖಂಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ