
ಪ್ರಗತಿವಾಹಿನಿ ಸುದ್ದಿ; ಲಖ್ನೌ: ಮದುವೆ ಅರಿಷಿಣ ಶಾಸ್ತ್ರದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು 13 ಮಹಿಳೆಯರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮದ ವೇಳೆ ನೆರೆದಿದ್ದ ಜನರು ಬಾವಿ ಮೇಲೆ ಹಾಕಿದ್ದ ಚಪ್ಪಡಿ ಮೇಲೆ ಕುಳಿತಿದ್ದರು. ಆದರೆ ಭಾರ ತಡೆಯಲಾಗದೇ ಚಪ್ಪಡಿ ಕುಸಿದು ಬಿದ್ದಿದೆ. ಪರಿಣಾಮ 15 ಮಹಿಳೆಯರು ಬಾವಿಗೆ ಬಿದ್ದಿದ್ದಾರೆ.
15 ಮಹಿಳೆಯರಲ್ಲಿ 13 ಮಹಿಳೆಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ರಾಜಲಿಂಗಂ ತಿಳಿಸಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಸಂಭವಿಸಿದ ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಸಚಿವ ಈಶ್ವರಪ್ಪ ಸ್ಪಷ್ಟನೆ