
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಬೆಳಗಾವಿ ವಿಜಯ ಇನ್ಸ್ ಟಿ ಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜು ಬಳಿ ವಿದ್ಯಾರ್ಥಿನಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಯುವಕರು ಸಾಥ್ ನೀಡಿದ ಬೆನ್ನಲ್ಲೇ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಲೇಜಿಗೆ ಹಿಜಾಬ್ ಧರಿಸಿ ಬಂಧ 20ಕ್ಕು ಹೆಚ್ಚು ವಿದ್ಯಾರ್ಥಿನಿಯರಿಗೆ ಹಾಜ್ ತೆಗೆಯಲು ಕಾಲೇಜು ಸಿಬ್ಬಂದಿ ಸೂಚಿಸಿದ್ದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಲೇಜಿಗೆ ಸಂಬಂಧ ಪದದ ಕೆಲ ಯುವಕರು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಾಥ್ ನೀಡಿದ್ದರು. ಅಲ್ಲದೇ ಹಿಜಾಬ್ ಧರಿಸಲು ಅವಕಾಶ ಕೊಡುವಂತೆ ಸಿಬ್ಬಂದಿಗಳ ಜತೆ ವಾಗ್ವಾದಕ್ಕಿಳಿದಿದ್ದರು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ, 6 ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕ್ಲಾಸಿಗೆ ತೆರಳು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಲೇಜಿಗೆಸಂಬಂಧವಿಲ್ಲದ ಯುವಕರ ಗುಂಪು ಕಾಲೇಜು ಬಳಿ ಗಲಾಟೆಗೆ ಯತ್ನಿಸುತ್ತಿತ್ತು. ಮುಂಜಾಗೃತಾ ಕ್ರಮವಾಗಿ ನಲವರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲಾಹೋ ಅಕ್ಬರ್ ಘೋಷಣೆ ಕೂದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.
ಕಾಲೇಜು ಗೇಟ್ ಬಳಿ ಸಂಬಂಧಪಡದವರು ಪ್ರವೇಶ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಇನ್ನು ನಗರದ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲಿಸ್ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದರು.
ಹಿಜಾಬ್ ತೆಗೆಯಲ್ಲ ಎಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು; ಯುವಕರಿಂದಲೂ ಧರಣಿಗೆ ಸಾಥ್; ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹೈ ಡ್ರಾಮಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ