ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅಲ್ಲದೇ ಇಂದಿನಿಂದ ಸದನದಲ್ಲಿಯೂ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
ಆದರೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಸಚಿವ ಈಶ್ವರಪ್ಪ, ರಾಷ್ಟ್ರಭಕ್ತನಾದ ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ, ಯಾವ ಕಾರನಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.
ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಸ್ಥಾನದಲ್ಲಿದ್ದು ಈಶ್ವರಪ್ಪ ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೆ. ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರಧ್ವಜ ಜಾಗದಲ್ಲಿ ಕೇಸರಿ ಧ್ವಜ ಹೇಳಿಕೆ ರಾಷ್ಟ್ರದ್ರೋಹದ ಕೆಲಸ. ತಕ್ಷಣ ಈಶ್ವರಪ್ಪ ರಾಜೀನಾಮೆ ಕೊಡಬೇಕು. ಇಲ್ಲವಾದರೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾದ ಕಾಂಗ್ರೆಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ