Latest

ಅಶ್ಲೀಲ ವಿಡಿಯೋ ಕಳುಹಿಸಿ ಪೀಡಿಸುತ್ತಿದ್ದ ಯುವಕ ಆರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಶ್ಲೀಲ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯರಿಗೆ ಕಾಟ ಕೊಡುತ್ತಿದ್ದ ಯುವಕನೊಬ್ಬನನ್ನು ಬೆಂಗಳೂರು ಆಗ್ನೇಯ ವಿಭಾಗ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಕೆ.ಎನ್.ಹರೀಶ್ (26) ಬಂಧಿತ ಆರೋಪಿ. ಫೇಸ್ ಬುಕ್, ವಾಟ್ಸಪ್ ಮೂಲಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ಮಹಿಳೆಯರಿಗೆ ತೊಂದರೆ ಕೊಡುತ್ತಿದ್ದ. ಅಲ್ಲದೇ ಪದೇ ಪದೇ ವಿಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Home add -Advt

ತನಿಖೆ ವೇಳೆ 10ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಯುವಕ ಕಾಟಕೊಡುತ್ತಿರುವ ಅಂಶ ಬೆಳಕಿಗೆ ಬಂದಿದೆ.

ನಾನು ಈಶ್ವರಪ್ಪ ರಾಜೀನಾಮೆ ಕೇಳ್ತಿಲ್ಲ ಎಂದ ಡಿಕೆಶಿ, ಮತ್ತೇನು ಅವರು ಕೇಳಿದ್ದು?

Related Articles

Back to top button