ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 9ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ರಮ್ಯಾ ಮೂರ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಹಿಂದೆ ವಿದ್ಯಾರ್ಥಿನಿ ತಾಯಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಇದೆ ವಿಚಾರವಾಗಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದೀಗ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ನಗರದ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆತ್ತ ತಾಯಿ ಮೇಲೆ ಜೀಪ್ ಹರಿಸಿ ಕೊಂದ ಮಗ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ