ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ 58 ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗದ ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ 58 ವಿದ್ಯಾರ್ಥಿನಿಯರನ್ನು ತಡೆದ ಕಾಲೇಜು ಸಿಬ್ಬಂದಿಗಳು ಹಿಜಾಬ್ ತೆಗೆದು ಕ್ಲಾಸಿಗೆ ಬರುವಂತೆ ಸೂಚಿಸಿದ್ದರು.ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದರು. ಇಂದು ಹಿಜಾಬ್ ಧರಿಸಿಬಂದ 58 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದರು.
ಸಸ್ಪೆಂಡ್ ಆದೇಶಕ್ಕೆ ಆಕ್ರೋಶಗೊಂಡಿರುವ ವಿದ್ಯಾರ್ಥಿನಿಯರು ಕಾಲೇಜು ಎದುರು ಬಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಏಕಾಏಕಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಹಿಜಾಬ್ ನಮ್ಮ ಹಕ್ಕು, ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ