Latest

ಹೈಕಮಾಂಡ್ ಸೂಚನೆ; ನಾಳೆ ಬೆಳಿಗ್ಗೆ ರಾಜ್ಯ ಬಿಜೆಪಿ ಮಹತ್ವದ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸದನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಹಾಗೂ ರಾಜ್ಯಾದ್ಯಂತ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ನಾಯಕರು ನಾಳೆ ಮಹತ್ವದ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬೆಳಿಗ್ಗೆ 7 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ ನಡೆಯಲಿದೆ.

Home add -Advt

ಸಚಿವ ಈಶ್ವರಪ್ಪ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿರುವ ಹಿನ್ನೆಲೆಯಲ್ಲಿ ಸಚಿವರ ಹೇಳಿಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕಾಂಗ್ರೆಸ್ ಧರಣಿಗೆ ಪ್ರತಿತಂತ್ರ ಹೆಣೆಯುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಸಚಿವರುಗಳು ಭಾಗವಹಿಸಲಿದ್ದಾರೆ.
ಶಿವಮೊಗ್ಗದಲ್ಲಿ ಯುವತಿ ಚುಡಾಯಿಸಿದ ಯುವಕರು; ಇಬ್ಬರ ಬರ್ಬರ ಹತ್ಯೆ

Related Articles

Back to top button