Latest

ಶಾಸಕ ಜಮೀರ್ ಅಹ್ಮದ್ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಹಾಗೂ ಕುಟೂಂಬದ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೇಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಶಾಹಿತಾ ನಾಸೀನ್, ತಸ್ನೀಮ್ ಫಾತಿಮಾ ಎಂಬುವವರು ಶಾಸಕ ಜಮೀರ್ ಅಹ್ಮದ್ ಹಾಗೂ ಸಹೋದರರ ವಿರುದ್ಧ ನಿವೇಶನ ಕಬಳಿಕೆ ಯತ್ನ ಅಡಿ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಹಿನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಜಮೀರ್ ಅಹ್ಮದ್, ಅತೀಕ್ ಕಾವರ್, ನ್ಯಾಷನಲ್ ಟ್ರಾವಲ್ಸ್ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಶಾಸಕ ಜಮೀರ್ ಕುಟುಂಬದ ವಿರುದ್ಧ ನಿವೇಶನ ಕಬಳಿಕೆ ಆರೋಪ ಮಾಡಿದ್ದ ಶಾಹಿತಾ ನಾಸೀನ್ ಕೋರ್ಟ್ ಮೆಟ್ತಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್, ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಅಲ್ಲದೇ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಆದೇಶ ನೀಡಿತ್ತು. ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ, ಜಮೀರ್ ಹಾಗೂ ಸಹೋದರರು ನಿವೇಶನ ಬಿಟ್ಟು ಕೊಟ್ಟಿರಲಿಲ್ಲ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಪಿಗೇಹಳ್ಳಿ ಠಾಣೆಯಲ್ಲಿ ಜಮೀರ್ ಅಹ್ಮದ್ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಮತ್ತೊಂದು ಆಘಾತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button