Latest

ಭಜರಂಗದಳ ಕಾರ್ಯಕರ್ತನ ಹತ್ಯೆ; ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ನಿನ್ನೆ ರಾತ್ರಿ 9:30ರ ಸುಮಾರಿಗೆ ದುಷ್ಕರ್ಮಿಗಳು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇದೀಗ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ನಗರ್ದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಮುಸ್ಲೀಂ ಗೂಂಡಾಗಳಿಂದಲೇ ಕೊಲೆ; ಸಚಿವ ಈಶ್ವರಪ್ಪ ಆರೋಪ

Related Articles

Back to top button