Latest

ಶಿವಮೊಗ್ಗ ಯುವಕನ ಮರ್ಡರ್: CM ಬೊಮ್ಮಾಯಿ ಹೇಳಿಕೆ

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಶಿವಮೊಗ್ಗದಲ್ಲಿ ನಮ್ಮ ಸಂಘಟನೆ ಕಾರ್ಯಕರ್ತನ ಹತ್ಯೆಯಾಗಿದೆ. ಇದೊಂದು ಆಘಾತಕಾರಿ ಘಟನೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಭಜರಂಗದಳ ಕಾರ್ಯಕರ್ತ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಸೂಕ್ತ ತನಿಖೆ ನಡೆಸುವಂತೆ ಗೃಹ ಸಚಿವರಿಗೆ, ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಶಿವಮೊಗ್ಗದಲ್ಲಿ ಶಾಂತಿ-ಸುವ್ಯವಸ್ಥೆ ಕದಡದಂತೆ ಮುಂಜಾಗೃತಾ ಕ್ರಮಕ್ಕೆ ಸೂಚಿಸಲಾಗಿದೆ. ಜಿಲ್ಲೆಯ ಜನರು ಶಾಂತಿ ಕಾಪಾಡಬೇಕು. ಯಾರೂ ಕೂಡ ಉದ್ವೇಗಕ್ಕೆ ಒಳಗಾಗಬಾರದು. ಕೃತ್ಯದ ಹಿಂದೆ ಯಾರಿದ್ದಾರೆ, ಕಾರಣವೇನು ಎಲ್ಲದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಭಜರಂಗದಳ ಕಾರ್ಯಕರ್ತನ ಹತ್ಯೆ; ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button