Karnataka News

ಟ್ವಿಟ್ ಗಳನ್ನು ಖಂಡಿತ ನಿಲ್ಲಿಸಲ್ಲ- ಚೇತನ್ ಅಹಿಂಸಾ 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪರಪ್ಪನ‌ ಅಗ್ರಹಾರ ಜೈಲಿನಿಂದ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಶುಕ್ರವಾರವೇ ಅವರಿಗೆ ಜಾಮೀನು ಸಿಕ್ಕಿತ್ತು. ಆದರೆ ನಾಲ್ಕನೇ‌ ಶನಿವಾರ ಆಗಿರುವುದರಿಂದ ಶ್ಯೂರಿಟಿ ಒದಗಿಸುವುದು ಸಾಧ್ಯವಾಗದಿರುವ ಕಾರಣ ಚೇತನ್​ ಅವರು ಸೋಮವಾರ ಸಂಜೆ  ಬಿಡುಗಡೆಯಾಗಿದ್ದಾರೆ.
ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ (ಐಪಿಸಿ 505 (2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ (ಐಪಿಸಿ 504) ನೀಡಿದ್ದಾರೆ’ ಎಂಬ ಆರೋಪದಡಿ ಚೇತನ್ ವಿರುದ್ಧ ಶೇಷಾದ್ರಿಪುರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.
ಜೈಲಿನಿಂದ ಬಿಡುಗಡೆಗೊಂಡಿರುವ ನಟ ಚೇತನ್ , ‘ ಟ್ವಿಟ್ ಗಳನ್ನು ಖಂಡಿತ ನಿಲ್ಲಿಸಲ್ಲ, ನಾವು ಪ್ರಜಾಪ್ರಭುತ್ವದಲ್ಲಿ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡೋದಕ್ಕೆ ಎಲ್ಲರಿಗೂ ಹಕ್ಕಿದೆ. ಅದು ಯಾರೇ ಆಗಿರಲಿ ಪ್ರಶ್ನೆ ಮಾಡೇ ಮಾಡ್ತೀನಿ’ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button