ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಕನ್ನಡಿಗ ನವೀನ್ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನವೀನ್ ಮೃತದೇಹ ಹೋಲುವ ಫೋಟೋಗಳು ಬಂದಿವೆ. ಆತನ ಸ್ನೇಹಿತರು ಫೋಟೋಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಭಾರತದ ರಾಯಭಾರ ಕಚೇರಿ ಜತೆ ಚರ್ಚೆ ನಡೆಸಲಾಗುತ್ತದೆ. ಯುದ್ಧ ನಡೆಯುತ್ತಿರುವುದರಿಂದ ಮೃತದೇಹ ಭಾರತಕ್ಕೆ ತರಲು ಸ್ವಲ್ಪ ಕಟ್ಟವಾಗುತ್ತಿದೆ. ಭಾರತಕ್ಕೆ ತರಲು ಪ್ರಯತ್ನ ನಡೆಸಿದ್ದೇವೆ ಎಂದರು.
ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕಾರಣ ಮಾತನಾಡುತ್ತಿದೆ. ಇದು ಸರಿಯಲ್ಲ. ಕಾಂಗ್ರೆಸ್ ಎಷ್ಟು ತಳಮಟ್ಟಕ್ಕೆ ಹೋಗಿದೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ರಷ್ಯಾ ದಾಳಿಯಲ್ಲಿ ಮಡಿದ ಕನ್ನಡಿಗ ನವೀನ್ ಮೃತದೇಹ ಪತ್ತೆ
ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ