ಚೊಚ್ಚಲ ಬಜೆಟ್ ಮಂಡನೆ ; ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ವಿವರ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಿಎಂ ಆಗಿ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ವಿವರ ಈ ಕೆಳಕಂಡಂತಿದೆ.
• ಕೃಷಿ ಇಲಾಖೆಗೆ 33,700 ಕೋಟಿ ರೂಪಾಯಿ
• ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,713 ಕೋಟಿ ರೂಪಾಯಿ
• ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 17,325 ರೂಪಾಯಿ
• ವಸತಿ ಇಲಾಖೆಗೆ 3,594 ರೂಪಾಯಿ
• ಆಹಾರ ಇಲಾಖೆಗೆ 2,288 ಕೋಟಿ ರೂಪಾಯಿ
• ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ
• ಇಂಧನ ಇಲಾಖೆಗೆ 12,655 ಕೋಟಿ ರೂಪಾಯಿ
• ಕಂದಾಯ ಇಲಾಖೆಗೆ 16,388 ಕೋಟಿ ರೂಪಾಯಿ
• ಲೋಕೋಪಯೋಗಿ ಇಲಾಖೆಗೆ 10,447 ಕೋಟಿ ರೂಪಾಯಿ
• ಪ್ರತಿಪಕ್ಷ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದ್ದ ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ.
ಶಿಕ್ಷಣ
ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ 500 ಕೋಟಿ ರೂ ಅನುದಾನ ಮೀಸಲಿಡಲಾಗಿದ್ದು, ಇದು ರಾಜ್ಯದಲ್ಲಿ ಮೊದಲ ಬಾರಿಗೆ ಎಂದು ಬೊಮ್ಮಾಯಿ ಬಜೆಟ್ ವೇಳೆ ತಿಳಿಸಿದ್ದಾರೆ.
ರಾಜ್ಯದ ಏಳು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆ ಗಳನ್ನಾಗಿ ಉನ್ನತೀಕರಣ ಮಾಡಲು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ, ಬೀದರ್ , ಹಾವೇರಿ , ಹಾಸನ, ಕೊಡಗು , ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು.
ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣದ ಯೋಜನೆ. ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಪೀಠೋಪಕರಣ ಒದಗಿಸಲು 100 ಕೋಟಿ ರೂ ಮೀಸಲಿಡಲಾಗಿದೆ. “ನೋಡಿ ಕಲಿ ಮಾಡಿ ತಿಳಿ” ಯೋಜನೆಯಡಿ ಕರ್ನಾಟಕದ 169 ಸರಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್ -ಇನ್-ಎ-ಕಿಟ್ ವಿತರಣೆ ಮಾಡಲು ಕಾರ್ಯಕ್ರಮ ಯೋಜಿಸಲಾಗಿದೆ.’
ಗುಣಮಟ್ಟದ ಶಿಕ್ಷಣ
• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.
• ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.
• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
• ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ.
• Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ; ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.
• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.