ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಪ್ರಥಮವಾಗಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಎಲ್ಲ ಸಮುದಾಯಗಳ ಹಾಗೂ ಎಲ್ಲ ನಾಗರಿಕರ ಹಿತರಕ್ಷಣೆಯನ್ನು ಕಾಪಾಡಿಕೊಂಡು ಜನರಿಂದ ಜನರಿಗಾಗಿ ಜನರಿಗೋಸ್ಕರವಾದ ಮತ್ತು ಸರ್ವವ್ಯಾಪಿ ಸರ್ವಸ್ಪರ್ಶಿ ಬಜೆಟನ್ನು ಮಂಡಿಸಿದ್ದಾರೆ ಎಂದು ಶಾಸಕ ಅನಿಲ್ ಬೆನಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಜೆಟ್‌ನಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಮೋ ಕ್ಲಿನಿಕ್ ಸ್ಥಾಪನೆ ಹಾಗೂ ಪ್ರಮುಖವಾಗಿ ಗೋ ರಕ್ಷಣೆಗೆ ಗೋ ಶಾಲೆಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.
ಮಹಿಳೆಯರನ್ನು ಸ್ವಾಲಂಭಿಯಾಗಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ವಿಶೇಷ ಅನುದಾನವನ್ನು ಒದಗಿಸಿರುವುದು ಸಂತೋಷದ ಸಂಗತಿಯಾಗಿದ್ದು, ಲಿಂಗಾಯತ ಅಭಿವೃಧ್ದಿ ನಿಗಮಕ್ಕೆ 100 ಕೋಟಿ ಹಾಗೂ ಮರಾಠಾ ಅಭಿವೃಧ್ದಿ ನಿಗಮಕ್ಕೆ 50 ಕೋಟಿ ಮತ್ತು ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮಕ್ಕೆ 50 ಕೋಟಿ ಹೀಗೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಮತ್ತು ತೃಪ್ತಿಕರವಾದ ಬಜೆಟ್ ಇದಾಗಿದೆ ಎಂದರು.
ಬೆಳಗಾವಿಗೆ ಪೂರಕ ಯೋಜನೆಗಳು ಸಂತಸ ತಂದಿದೆ; ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ