
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರ ಸ್ಥಳಾಂತರ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ಉಕ್ರೇನ್ ನಲ್ಲಿ ಸಿಲುಕಿದ್ದ ರಾಜ್ಯದ ಹಲವು ವಿದ್ಯಾರ್ಥಿಗಳನ್ನು ಕೂಡ ಏರ್ ಲಿಫ್ಟ್ ಮಾಡಲಾಗುತ್ತಿದೆ. ಉಕ್ರೇನ್ ನಿಂದ ತಾಯ್ನಾಡಿಗೆ ಮರಳಿದ ಧಾರವಾಡದ ವಿದ್ಯಾರ್ಥಿನಿಯನ್ನು ಸ್ವತ: ಸಿಎಂ ಬರಮಾಡಿಕೊಂಡಿದ್ದಾರೆ.
ಧಾರವಾಡದ ಕುಂದಗೋಳ ತಾಲೂಕಿನ ಯಲವಿಗಿ ಗ್ರಾಮದ ಚೈತ್ರಾ ಸಂಶಿ, ಉಕ್ರೇನ್ ನಲ್ಲಿ ಸಂಕಷ್ಟಕ್ಕೀಡಾಗಿದ್ದರು. ಇದೀಗ ಸುರಕ್ಷಿತವಾಗಿ ಚೈತ್ರಾ ಅವರನ್ನು ಏರ್ ಲಿಫ್ಟ್ ಮಾಡಲಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಸುರಕ್ಷಿತವಾಗಿ ವಾಪಸ್ ಆಗಿದ್ದಕ್ಕೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದರು.
ಖಾರ್ಕೀವ್ ತೊರೆದ ಭಾರತೀಯರು; ಸಿಎಂ ಹೇಳಿದ್ದೇನು?