Latest

ಹರ್ಷ ಹತ್ಯೆ ಪ್ರಕರಣ; 10 ಆರೋಪಿಗಳ ವಿರುದ್ಧ UAPA ಜಾರಿ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದುಇದ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 10 ಆರೋಪಿಗಳ ವಿರುದ್ಧ UAPA ಜಾರಿಗೊಳಿಸಲಾಗಿದೆ.

ಇತ್ತೀಚೆಗೆ ಶಿವಮೊಗ್ಗದ ಶಿಕಾರಿಪುರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ದುಷ್ಕರ್ಮಿಗಳು ನಡುರಸೆಯಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಪ್ರಕರಣ ಸಂಬಂಧ ಎಲ್ಲಾ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Home add -Advt

ಇದೀಗ ಬಂಧಿತ ಆರೋಪಿಗಳ ವಿರುದ್ಧ ಕಠಿಣವಾದ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (Unlawful Activities Prevention Act -UAPA) ಜಾರಿಗೊಳಿಸಲಾಗಿದೆ.

ರಾಷ್ಟ್ರೀಯ ಭದ್ರತೆಯನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿದ ಆರೋಪದಂತಹ ಘಟನೆ ನಡೆದಾಗ ಅಂತಹ ಆರೋಪಿಗಳ ವಿರುದ್ಧ ಯುಎಪಿಎ ನ್ನು ಜಾರಿಗೊಳಿಸಲಾಗುತ್ತದೆ. ಇದೀಗ ಹರ್ಷ ಹತ್ಯೆ ಆರೋಪಿಗಳ ವಿರುದ್ಧವೂ ಈ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮತ್ತೆ ಕಚ್ಚಾ ತೈಲ ಬೆಲೆ ಹೆಚ್ಚಳ: ಪೆಟ್ರೋಲ್-ಡೀಸೆಲ್ ದರದಲ್ಲಿ ಭಾರಿ ಏರಿಕೆ ಆತಂಕ; ಕಚ್ಚಾ ತೈಲ ಬ್ಯಾರೆಲ್ ಗೆ 130 ಡಾಲರ್ ನಿಗದಿ

Related Articles

Back to top button