ರಾಜ್ಯದ ಡೀಮ್ಟ್ ವಿವಿಗಳಲ್ಲಿ ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಪ್ರವೇಶ – ಕೋಡ್ ಯುನಿಕ್ ಅಧ್ಯಕ್ಷ ಡಾ.ಪ್ರಭಾಕರ ಕೋರೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಉಕ್ರೇನ್‌ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದು ಬರುವಂತಹ ಸ್ಥಿತಿ ನಿರ್ಮಾಣವಾಗಿರುವುದರಿಂದ ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ಕಲಿಯುತ್ತಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವನ್ನು ಮುಂದುವರೆಸಲು ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶವನ್ನು ನೀಡಲಾಗುವುದೆಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಕೋಡ್‌ಯುನಿಕ್ (ಕರ್ನಾಟಕ ರಾಜ್ಯ ಎಲ್ಲ ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ) ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಕೋರೆಯವರು ತಿಳಿಸಿದ್ದಾರೆ ತಿಳಿಸಿದ್ದಾರೆ.
ಈ ಕುರಿತು ಅವರು ಹೇಳಿಕೆ ನೀಡಿದ್ದಾರೆ. ಉಕ್ರೇನ್‌ದಿಂದ ಭಾರತೀಯ ವೈದ್ಯ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆದತಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಡಾ.ಪ್ರಭಾಕರ ಕೋರೆ ಧನ್ಯವಾದ ಸಲ್ಲಿಸಿದ್ದಾರೆ.
ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಅತಂತ್ರಗೊಂಡ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಮೂಲಕ ಸ್ವದೇಶಕ್ಕೆ ಹಗಲಿರುಳು ಶ್ರಮಿಸಿ ಕರೆತಂದಿದೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕ ಸಂಖ್ಯೆಯಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಏರ್‌ಲಿಫ್ಟ್ ಮೂಲಕ ಕರೆತರುವಲ್ಲಿ ಅಪ್ರತಿಮವಾದ ಕಾರ್ಯವನ್ನು ನಿರ್ವಹಿಸಿದ್ದಾರೆ, ತನ್ನಿಮಿತ್ತ ಪ್ರಧಾನಿಯವರಿಗೆ ಹಾಗೂ ಅವರ ಸಮಸ್ತ ತಂಡಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆಂದು ಅವರು ಹೇಳಿದ್ದಾರೆ.
ಪ್ರಧಾನಿಯವರು ಸೂಚಿಸಿರುವಂತೆ ಉಕ್ರೇನ್‌ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದುಬರುವಂತಹ ಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ, ಅಂತೆಯೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ಕಲಿಯುತ್ತಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವನ್ನು ಮುಂದುವರೆಸಲು, ಪ್ರವೇಶವನ್ನು ನೀಡಲಾಗುವುದೆಂದು ತಿಳಿಸಿದ್ದಾರೆ.
ಉಕ್ರೇನ್ ರಷ್ಯಾ ಅನಿರ್ದಿಷ್ಟಾವಧಿಯ ಯುದ್ಧದಿಂದ ಭಾರತೀಯ ವೈದ್ಯ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಯನ್ನು ಪಡುವಂತಾಗಿದ್ದು, ಅವರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾಲಿಕವಾಗಿ ಸ್ಪಂದಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿಯೂ ಹತಾಶರಾಗದೆ, ತಮ್ಮ ವೈದ್ಯಕೀಯ ಕನಸುಗಳನ್ನು ಭಾರತದಲ್ಲಿಯೇ ನನಸುಗೊಳಿಸಿಕೊಳ್ಳಬಹುದು. ಆ ಎಲ್ಲ ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕು ಎಂದು ಡಾ.ಕೋರೆಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕ ಸಂಖ್ಯೆಯಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಏರ್‌ಲಿಫ್ಟ್ ಮೂಲಕ ಕರೆತರುವಲ್ಲಿ ಅಪ್ರತಿಮವಾದ ಕಾರ್ಯವನ್ನು ನಿರ್ವಹಿಸಿದ್ದಾರೆ, ತನ್ನಿಮಿತ್ತ ಪ್ರಧಾನಿಯವರಿಗೆ ಹಾಗೂ ಅವರ ಸಮಸ್ತ ತಂಡಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ
-ಡಾ.ಪ್ರಭಾಕರ ಕೋರೆ
ಈ ಉಪಕಾರ ಎಂದಿಗೂ ಮರೆಯಲ್ಲ; ಭಾರತೀಯ ರಾಯಭಾರ ಕಚೇರಿ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕಿಸ್ತಾನ ಯುವತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ