Latest

ಗೋವಾ ಮತದಾರರು ಬದಲಾವಣೆ ಬಯಸಿದ್ದಾರೆ: ಡಿ.ಕೆ. ಶಿವಕುಮಾರ್ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾ ಮತದಾರರು ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಸರ್ಕಾರ ತರಲು ಇಚ್ಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಳೆದ ಬಾರಿ ಆದ ತಪ್ಪು ಈ ಬಾರಿ ಮರುಕಳಿಸುವುದಿಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ನಮ್ಮ ಎಲ್ಲ ಸದಸ್ಯರು ಪಕ್ಷದ ಪರ ನಿಷ್ಠೆ ತೋರಿದ್ದು, ಯಾರೊಬ್ಬರೂ ಪಕ್ಷ ತೊರೆಯುವುದಿಲ್ಲ. ಎಲ್ಲರೂ ಒಟ್ಟಾಗಿ ಹೋರಾಡಿದ್ದು, ಪರಿಸ್ಥಿತಿಯನ್ನು ಒಟ್ಟಾಗಿ ನಿಭಾಹಿಸುತ್ತೇವೆ’ ಎಂದರು.

ಗೋವಾದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ಸಿಎಂ ಅವರ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅನ್ಯ ಪಕ್ಷದ ಹಾಗೂ ಆ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

ಫಲಿತಾಂಶದ ದಿನ ನೀವೇ ಕೇಂದ್ರ ಬಿಂದು ಆಗಿದ್ದು ಕಳೆದ ಬಾರಿ ಆದ ತಪ್ಪು ಮರುಕಳಿಸದಂತೆ ತಡೆಯಲು ನಿಮ್ಮ ಮೇಲೆ ಜವಾಬ್ದಾರಿ ಹೆಚ್ಚಿದೆಯೇ ಎಂಬ ಪ್ರಶ್ನೆಗೆ, ‘ಇಲ್ಲಿ ಎಲ್ಲರೂ ಪ್ರಮುಖರೇ. ನಮ್ಮ ರಾಜ್ಯದಿಂದ ಹಲವು ನಾಯಕರು ಬಂದಿದ್ದು, ನಾವು ಸಹಾಯ ಮಾಡಲು ಬಂದಿದ್ದೇವೆ ಅಷ್ಟೇ’ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button