ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯಾರ್ಥಿಗಳು ತಂದೆ-ತಾಯಿ ಜತೆಗೆ ಶಿಕ್ಷಣ ಪಡೆದ ಶಾಲೆಗೂ ಕೀರ್ತಿ ತರಬೇಕೆಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.
ನಗರದ ಜಾಧವ ನಗರದ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ಹಮ್ಮಿಕೊಂಡಿದ್ದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಮರಾಠಿ ಮಾಧ್ಯಮ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನತ್ತ ನಮ್ಮ ಪಯಣ” ಅಭ್ಯಾಸ ಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಈಗಾಗಾಲೇ ಬೆಳಗಾವಿ ಜಿಲ್ಲೆಯ 915 ಪ್ರೌಢ ಶಾಲೆಗಳ ಕನ್ನಡ, ಉರ್ದು, ಇಂಗ್ಲೀಷ್ ಮಾಧ್ಯಮ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಲಾಗಿದ್ದು, ಈಗ ಮಾರಾಠಿ ಮಾಧ್ಯಮ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
ಈ ಪುಸ್ತಕಗಳನ್ನು ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ನಿಮ್ಮ ವಿದ್ಯಾರ್ಥಿ ಜೀವನವನ್ನು ಸದೃಢಗೊಳಿಸಿಕೊಳ್ಳಿ ಎಂದು ಕರೆ ನೀಡಿದ ಅವರು, ಸತೀಶ್ ಜಾರಕಿಹೊಳಿ ಫೌಂಡೇಶನ್ ದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿಶೇಷವಾಗಿ ಈ ಬಾರಿ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಸಿದ್ದು ಸುಣಗಾರ, ಯಲ್ಲಪ ಬುಡರಿ, ವಿಜಯ ಹೊನಮನಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 21 ನೇ ಘಟಿಕೋತ್ಸವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ