Latest

ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ಪ್ರಗತಿ ವಾಹಿನಿ ಸುದ್ದಿ ಶಿರಸಿ: ಸಾಲ ಸೋಲ ಮಾಡಿ ಬೆವರು ಹರಿಸಿ ದುಡಿಯುವ ರೈತರಿಗೆ ಒಮ್ಮೊಮ್ಮೆ ಪ್ರಕೃತಿಯೇ ಕೈ ಕೊಟ್ಟರೆ, ಮತ್ತೊಮ್ಮೆ ಬೆಳೆದ ಬೆಳೆಗೆ ಬೆಲೆಯಿಲ್ಲದೆ ನಷ್ಟ ಅನುಭವಿಸಬೇಕಾಗುತ್ತದೆ. ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸರ್ಕಾರ ಮಾತ್ರ ರೈತರೆಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ ಎಂಬ ಆರೋಪ ರೈತರ ವಲಯದಿಂದ ನಿರಂತರವಾಗಿ ಕೇಳಿ ಬರುತ್ತಲೇ ಇದೆ.

ಈ ನಡುವೆ ಶಿರಸಿ ತಾಲೂಕಿನ ಬನವಾಸಿ ಬಳಿಯ ರೈತರೊಬ್ಬರು ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಶಿರಸಿ ತಾಲೂಕಿನ ಬನವಾಸಿ ಬಳಿಯ ಭಾಶಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೂರು ಗ್ರಾಮದ ನಾಗೇಂದ್ರ ಕನ್ನಪ್ಪ ನಾಯ್ಕ (೫೦) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ನಾಗೇಂದ್ರ ನಾಯ್ಕ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬನವಾಸಿಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ೯೮ ಸಾವಿರ ಸಾಲ ಪಡೆದು ಭತ್ತ ಬೆಳೆದಿದ್ದರು. ಅಲ್ಲದೇ ಕುಟುಂಬಕ್ಕೆ ೧.೨೦ ಲಕ್ಷ ಹಳೆಯ ಸಾಲವಿತ್ತು. ನುಸಿ ರೋಗದಿಂದ ಈ ಬಾರಿ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದಿದ್ದ ಅವರು ಸಾಲ ಮರುಪಾವತಿಯ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಕುಟುಂಬ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದೆ.

ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯ್ ಮಲ್ಯ ವಿರುದ್ಧ ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಒಂದೇ ವರ್ಷದಲ್ಲಿ ಎರಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ! ಇದು ಹೇಗೆ ಸಾಧ್ಯವಾಯ್ತು ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button