Latest

ಪೊಲೀಸ್ ವೇಷದಲ್ಲಿ ವಂಚನೆ; ಕಾರಿನ ಸಮೇತ ಎಸ್ಕೇಪ್ ಆಗಿದ್ದ ಕಳ್ಳರು ಅಂದರ್

 ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೆಕೆಂಡ್ ಹ್ಯಾಂಡ್ ಕಂಟೇನರ್ ಕೊಡಿಸುವ ಆಮಿಷವೊಡ್ಡಿ ವ್ಯಕ್ತಿಯೋರ್ವರನ್ನು ಕರೆಸಿಕೊಂಡಿದ್ದ ದುಷ್ಕರ್ಮಿಗಳು ಅರ್ಧದಾರಿಯಲ್ಲಿ ಲಕ್ಷಾಂತರ ರೂಪಾಯಿ ಕದ್ದು, ಕಾರಿನೊಂದಿಗೆ ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ ನ್ನು ಇದೀಗ ಬೆಂಗಳೂರಿನ ಕೆ.ಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಟರಾಜನ್, ಸದಾಶಿವ ನಾಯಕ್, ಶಿವರಾಜ್, ದಿಲ್ಲುಬೋನ್, ನಿರ್ಮಲಾ ಎಂದು ಗುರುತಿಸಲಾಗಿದೆ.

ರಂಗಸ್ವಾಮಿ ಎಂಬುವವರಿಗೆ ಸೆಕೆಂಡ್ ಹ್ಯಾಂಡ್ ಕಂಟೇನರ್ ಕೊಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ತರುವಂತೆ ಹೇಳಿ ಹೆಚ್ ಬಿ ಆರ್ ಲೇಔಟ್ ಗೆ ಕರೆಸಿಕೊಂಡಿದ್ದ ದುಷ್ಕರ್ಮಿಗಳು, ಬಳಿಕ ರಂಗಸ್ವಾಮಿಯವರೊಂದಿಗೆ ಅರ್ಧ ಕಿ.ಮೀ ಸಾಗಿದ್ದರು. ಅರ್ಧದಾರಿಯಲ್ಲಿ ಪೊಲೀಸರ ವೇಷದಲ್ಲಿ ಬಂದ ಕೆಲ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ರಂಗಸ್ವಾಮಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಬಳಿಕ ಹಣ ಹಾಗೂ ಕಾರಿನ ಸಮೇತ ಎಸ್ಕೇಪ್ ಆಗಿದ್ದಾರೆ. ಈ ಕುರಿತು ಕೆ.ಜಿ.ಹಳ್ಳಿ ಠಾಣೆಯಲ್ಲಿ ರಂಗಸ್ವಾಮಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಶವ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button