
ಪ್ರಗತಿವಾಹಿನಿ ಸುದ್ದಿ; ಮೈಸೂರು: ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮಶೇಖರಪ್ಪ (53) ಸಜೀವ ದಹನಗೊಂಡ ವ್ಯಕ್ತಿ. ಬೆಂಕಿ ಕೆನ್ನಾಲಿಗೆಗೆ ಅಕ್ಕಪಕ್ಕದ ಎರಡು ಮನೆಗಳಿಗೂ ಹಾನಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.