ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅವಧಿಪೂರ್ವ ಚುನಾವಣೆ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆಯೇ ನಡೆದಿಲ್ಲ, ವಿಪಕ್ಷದವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಷ್ಟೇ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಅವಧಿಪೂರ್ವ ಚುನಾವಣೆ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ನಡೆದಿಲ್ಲ. ಇನ್ನು ನಮ್ಮ ಪಕ್ಷದವರು ಬೇರೆ ಪಕ್ಷದತ್ತ ಮುಖ ಮಾಡುತ್ತಲೂ ಇಲ್ಲ. ಬೇರೆ ಪಕ್ಷದವರು ಬಿಜೆಪಿಗೆ ಬರುವವರ ಬಗ್ಗೆ ಕಾದು ನೋಡಿ ಎಂದು ಹೇಳಿದರು.
ಇದೇ ವೇಳೆ ಸಂಪುಅ ಪುನಾರಚನೆ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ವರಿಷ್ಠರು ಇನ್ನೂ ನನಗೆ ಸೂಚನೆ ಕೊಟ್ಟಿಲ್ಲ. ವರಿಷ್ಥರು ಯಾವಾಗ ಹೇಳುತ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ. ವರಿಷ್ಠರು ಸೂಚಿಸಿದಾಗ ದೆಹಲಿಗೆ ತೆರಳುತ್ತೇನೆ. ಅಲ್ಲಿಯವರೆಗೂ ದೆಹಲಿ ಪ್ರವಾಸವಿಲ್ಲ ಎಂದರು.
ಇನ್ನು ಇದೇ ತಿಂಗಳ 30 ಹಾಗೂ 31ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸ ಸೇರಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಪೇಟಿಎಂ ಸಂಸ್ಥಾಪಕ ಅರೆಸ್ಟ್ ಜಾಮೀನಿನ ಮೇಲೆ ಬಿಡುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ