ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಸಲೀಲೆ ಆಡಿಕೊಂಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಮಾಡಿದ ಸಾಧನೆಯೇನು? 14 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಕಷ್ಟ ಆಲಿಸದೇ, ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಗಮನ ಕೊಡದೇ ಅವರು ಐಷಾರಾಮಿಯಾಗಿ ಹೋಟೆಲ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿಯೂ ಬಂದಿತ್ತು. ಈ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಇನ್ನು ಅವರ ಬಗ್ಗೆ ನನ್ನ ಬಾಯಲ್ಲಿ ಯಾಕೆ ಅಣಿಮುತ್ತು ಕೇಳಿಸ್ತೀರಾ? ಸಿಎಂ ಆಗಿದ್ದಾಗ ಒಂದು ದಿನ ಕೂಡ ಚನ್ನಪತ್ಟಣಕ್ಕೆ ಬಂದು ಜನರ ಸಮಸ್ಯೆ ಕೇಳಿಲ್ಲ, ಈಗ ತಾಲೂಕಿಗೆ ಬಂದು ಕಣ್ಣೀರು ಹಾಕಿ ನಾಟಕ ಮಾಡಿದರೆ ಏನು ಉಪಯೋಗ? ಜನರೆ ತಕ್ಕ ಪಾಠ ಕಲಿಸುತ್ತಾರೆ ಅಷ್ಟೇ. ಹೆಚ್.ಡಿ.ಕೆ ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ನಾನು ಕೂಡ ಏಕವಚನದಲ್ಲಿಯೇ ಮಾತನಾಡುತ್ತೇನೆ. ಯಾವುದೇ ವಿಚಾರವಾಗಲಿ ಕುಮಾರಸ್ವಾಮಿ ಬಹಿರಂಗವಾಗಿ ಚರ್ಚೆಗೆ ಬರಲಿ ಉತ್ತರಿಸಲು ಸಿದ್ಧ ಎಂದು ಹೇಳಿದರು.
ನರ್ಸ್ ಸಮವಸ್ತ್ರದಲ್ಲಿ ಬಂದ ಕಳ್ಳರು; ನವಜಾತ ಶಿಶುವನ್ನೇ ಕದ್ದು ಎಸ್ಕೇಪ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ