Latest

ವಾಲ್ಮೀಕಿ ಪೀಠದ ಶ್ರೀಗಳ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಹೋರಾಟ: ಸತೀಶ್‌ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಗೋಕಾಕ: ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಧರಣಿ ಮಾಡುತ್ತಿದ್ದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಹರಿಹರ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲವೆಂದು ತಿಳಿಸಿದರು.

ಬಿಜೆಪಿಯವರು ಚುನಾವಣೆ ಬಂದಾಗ ಮಾತ್ರ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಎಲ್ಲಿಯೂ ಮಾತನಾಡಲ್ಲ ಎಂದು ಆರೋಪಿಸಿದರು.

ಸರ್ಕಾರ ಶ್ರೀಗಳ ಹೋರಾಟಕ್ಕೆ ಸ್ಪಂದಿಸದಿದ್ದರೆ ಈ ಕುರಿತು ಜಿಲ್ಲಾ, ತಾಲೂಕು ಮಟ್ಟದಲ್ಲಿಯೂ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಇದೇ ವೇಳೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಾಜ್ ವೆಸ್ಟ್ ಎಂಡ್ ನಲ್ಲಿ ಕುಮಾರಸ್ವಾಮಿ ರಾಸಲೀಲೆ; ಸಿ.ಪಿಯೋಗೇಶ್ವರ್ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button