Latest

ಹಿಜಾಬ್ ವಿವಾದ; ಎಲ್ಲಾ ರಿಟ್ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್; ಮಹತ್ವದ ತೀರ್ಪು ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಗಮನ ಸೆಳೆದಿದ್ದ ಹಿಜಾಬ್ ಕುರಿತ ಎಲ್ಲಾ ರಿಟ್ ಅರ್ಜಿಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ರಿಟ್ ಅರ್ಜಿಯನ್ನು ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ವಜಾಗೊಳಿಸಿದ್ದು, ಸರ್ಕಾರದ ಸಮವಸ್ತ್ರ ನೀತಿ ಆದೇಶವನ್ನು ಎತ್ತಿ ಹಿಡಿದಿದೆ.

ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಮುಸ್ಲೀಂ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೇಳಿರುವ ಹೈಕೋರ್ಟ್ ಪೀಠ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಮಹತ್ವದ ತೀರ್ಪು ನೀಡಿದೆ.

ಜನವರಿ 31ರಂದು ಹಿಜಾಬ್ ಧರಿಸಲು ಅವಕಾಶ ಕೋರಿ ಹೈಕೋರ್ಟ್​ನಲ್ಲಿ ಉಡುಪಿ ಮೂಲದ ವಿದ್ಯಾರ್ಥಿನಿಯರಿಂದ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಫೆಬ್ರವರಿ 3 ರಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ನಡೆಯಲಿದೆ. ಮೂರು ದಿನಗಳ ಕಾಲ ಏಕಸದಸ್ಯ ಪೀಠದಿಂದ ವಿಚಾರಣೆ ಬಳಿಕೆ ಫೆ.9 ರಂದು ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು. ಫೆಬ್ರವರಿ 10 ರಂದು ವಿಸ್ತೃತ ಪೀಠದಿಂದ ಯಾವುದೇ ಧಾರ್ಮಿಕ ಗುರುತು ಧರಿಸಿ ಶಾಲೆ, ಕಾಲೇಜುಗಳಿಗೆ ತೆರಳದಂತೆ ಮೌಖಿಕ ಆದೇಶ ಹೊರಡಿಸಿತ್ತು. ಫೆಬ್ರವರಿ 11 ರಂದು ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್​ನಿಂದ ಮಧ್ಯಂತರ ಆದೇಶ ನೀಡಲಾಗಿತ್ತು. ನಂತರ 11 ದಿನಗಳ ಕಾಲ ಅರ್ಜಿದಾರರು, ಮಧ್ಯಂತರ ಅರ್ಜಿದಾರರು ವಾದ ಮಂಡನೆ ಮಾಡಿದ್ದರು. ಸುಧೀರ್ಘ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

Home add -Advt

ಇದನ್ನೂ ಓದಿ –

ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ, ಸಮವಸ್ತ್ರ ಕಡ್ಡಾಯಕ್ಕೆ ವಿರೋಧ ಸಲ್ಲ, ಸರಕಾರದ ಆದೇಶ ಪಾಲಿಸಲೇ ಬೇಕು- ಹೈಕೋರ್ಟ್ ತೀರ್ಪು; ಸರಕಾರದ ಆದೇಶ ಎತ್ತಿ ಹಿಡಿದ ಕೋರ್ಟ್

Related Articles

Back to top button