ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಲ್ಲಿ ವಿಶೇಷ ಮನವಿ ಮಾಡಿದ್ದಾರೆ.
ಹಿಜಾಬ್ ಕುರುತ ತೀರ್ಪು ನ್ಯಾಯಾಲಯದಲ್ಲಿ ಪ್ರಕಟವಾಗಿದೆ. ತೀರ್ಪನ್ನು ಎಲ್ಲಾ ಕಾರ್ಯಕರ್ತರು ಸಮಚಿತ್ತದಿಂದ ಸ್ವೀಕರಿಸಿ. ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ವಿಜಯೋತ್ಸವ, ಮೆರವಣಿಗೆ ಸಂಭ್ರಮಾಚರಣೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಮುಸ್ಲೀಂ ಮಹಿಳೆಯರಿಗೆ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೇಳಿರುವ ಹೈಕೋರ್ಟ್ ತ್ರಿಸದಸ್ಯ ಪೀಠ, ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ಧವಾಗಿದೆ ಎಂದು ತೀರ್ಪು ನೀಡಿದೆ.
ಕಾರ್ಯಕರ್ತರಲ್ಲಿ ಮನವಿ. pic.twitter.com/AJJHN23oKw
— BJP Karnataka (@BJP4Karnataka) March 15, 2022
ಶಾಂತಿ-ಸುವ್ಯವಸ್ಥೆ ಕಾಪಾಡಿ; ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ; ಸಿಎಂ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ