ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಲವು ದಿನಗಳಿಂದ ನಿಗದಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆಯಾಗಿದೆ.
ಈ ತಿಂಗಳಾಂತ್ಯ ಮಾರ್ಚ್ 30 ಹಾಗೂ 31ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿಯಾಗಿತ್ತು. ಆದರೆ ಇದೀಗ ಸಭೆಯನ್ನು ಏಪ್ರಿಲ್ 14 ಹಾಗೂ 15ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿ ಆಗಮನಕ್ಕೂ ಒಮ್ದು ವಾರ ಮೊದಲು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ಉದ್ದೇಶಿಸಲಾಗಿದೆ.
ಸಭೆಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಅವರ ಸ್ವಾಗತಕ್ಕಾಗಿ ಮಾಡಿಕೊಳ್ಳಬೇಕಾದ ಸಿದ್ಧತೆ, ನಿಗಮ ಮಂಡಳಿ ನೇಮಕ, ಸಚಿವ ಸಂಪುಟ ಪುನಾರಚನೆ, ವಿಧಾನಸಭಾ ಚುನಾವಣೆಗೆ ತಯಾರಿ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ.
ಮುಖ್ಯಮಂತ್ರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ