Latest

ಮೋದಿ ಬಯೋಪಿಕ್ ಬಗ್ಗೆ ಸುಪ್ರಿಂಗೆ ಆಯೋಗ ಸಲ್ಲಿಸಿದ ವರದಿಯಲ್ಲಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ,  ನವದೆಹಲಿ:
ಪ್ರಸ್ತುತ ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಮೋದಿ ಬಯಪಿಕ್ ಬಿಡುಗಡೆಗೆ ಅನುಮತಿ ನೀಡುವುದಿಲ್ಲ ಎಂದು ಚುನಾವಣೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ. 
ಈ ಬಯೋಪಿಕ್​ನಲ್ಲಿ ನರೇಂದ್ರ ಮೋದಿಯವರನ್ನು ತುಂಬ ಪ್ರಶಂಸಿಸಿ ಚಿತ್ರಿಸಲಾಗಿದೆ. ಅಲ್ಲದೆ ಬಹುತೇಕ ಪ್ರತಿಪಕ್ಷಗಳು ಭ್ರಷ್ಟವೆಂದು ಹಲವು ದೃಶ್ಯಗಳಲ್ಲಿ ಬಿಂಬಿಸಲಾಗಿದೆ. ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿದರೆ ಚುನಾವಣಾ ವ್ಯವಸ್ಥೆ ಒಂದು ಪಕ್ಷದ ಪರ ಒಲವು ತೋರಿದಂತೆ ಆಗುತ್ತದೆ ಎಂದು ಆಯೋಗ ಹೇಳಿದೆ.
ಮೋದಿಯವರ ಬಯೋಪಿಕ್​ ಸಿನಿಮಾ ನೋಡಿ  ಸಿನಿಮಾ ಬಿಡುಗಡೆ ಬಗ್ಗೆ ತೀರ್ಮಾನಿಸಿ ಏ.22ರೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್​ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಏ.17ರಂದು ಆಯೋಗದ ಏಳು ಅಧಿಕಾರಿಗಳನ್ನೊಳಗೊಂಡ ತಂಡ ಪಿಎಂ ನರೇಂದ್ರ ಮೋದಿಯವರ ಬಯೋಪಿಕ್​ ಸಿನಿಮಾವನ್ನು ವೀಕ್ಷಿಸಿತ್ತು.
 ಲೋಕಸಭಾ ಚುನಾವಣೆಯ ಮತದಾನದ ಎಲ್ಲ ಹಂತಗಳು ಮುಗಿಯುವವರೆಗೂ ಅನುಮತಿ ನೀಡುವುದಿಲ್ಲ ಎಂದು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button