ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ಕೆಎಲ್ಇ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸಂಸದ ಸುರೇಶ ಅಂಗಡಿ ಗುರುವಾರ ಬೆಳಗ್ಗೆ ಭೇಟಿಯಾದರು.
ಬುಧವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿರುವ ವೆಂಕಯ್ಯ ನಾಯ್ಡು ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಪ್ರವಾಸಿ ಮಂದಿರಕ್ಕೆ ತೆರಳಿದ ಅಂಗಡಿ ನಾಯ್ಡು ಜೊತೆ ಸೌಹಾರ್ಧಯುತ ಮಾತುಕತೆ ನಡೆಸಿದರು.
ವೆಂಕಯ್ಯ ನಾಯ್ಡು ಕೇಂದ್ರ ನಗರಾಭಿವೃದ್ದಿ ಸಚಿವರಾಗಿದ್ದಾಗ ಬೆಳಗಾವಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದನ್ನು ಈ ವೇಳೆ ಸ್ಮರಿಸಿ, ಯೋಜನೆಯ ಜಾರಿ ಕುರಿತು ಚರ್ಚಿಸಲಾಯಿತು ಎಂದು ಸುರೇಶ ಅಂಗಡಿ ಪ್ರಗತಿವಾಹಿನಿಗೆ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ