Latest

ರಾಜ್ಯದ 7 ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಕಲಿ ಪ್ರಮಾಣಪತ್ರ ನೀಡಿ ಮುಂಬಡ್ತಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ 7 ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲು ಸರ್ಕಾರ ಮುಂದಾಗಿದೆ.

7 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರ್ಥಿಕ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ. ನಿರ್ದೇಶನಾಲಯ ಹಂತದಲ್ಲಿ ನಿಯಮಗಳನ್ವಯ ಮುಂಬಡ್ತಿ ಪಡೆಯಲು 7 ಅಧಿಕಾರಿಗಳು ನಕಲಿ ಅಂಕಪಟ್ಟಿ ಸಲ್ಲಿಕೆ ಮಾಡಿದ್ದಾರೆ. ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಾಹಿತಿ ಹಕ್ಕು ಹೋರಾಟಗಾರ ರವೀಂದ್ರ, ಈ ಹಿಂದೆ ಸಚಿವ ನಾರಾಯಣಗೌಡಗೆ ದೂರು ನೀಡಿದ್ದರು.

ಸಚಿವರ ಸೂಚನೆ ಮೇರೆಗೆ ತನಿಖೆ ನಡೆಸಿರುವ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪದವಿ ನೈಜತೆ ಪರಿಶೀಲನೆಸಭೆ ನಡೆಸಿದ್ದು, ಸಭೆಯಲ್ಲಿ 45 ಅಧಿಕಾರಿಗಳ ಪೈಕಿ 7 ಅಧಿಕಾರಿಗಳ ಪ್ರಮಾಣ ಪತ್ರ ನಕಲಿ ಎಂದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಕಾಶ್ಮೀರ್ ಫೈಲ್ಸ್ ಬಗ್ಗೆ ವಿವಾದಾತ್ಮಕ ಟ್ವೀಟ್; ಐಎ ಎಸ್ ಅಧಿಕಾರಿಗೆ ಸಂಕಷ್ಟ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button