Kannada NewsKarnataka NewsLatest
1.48 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಗುರುವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸುಮಾರು 1.48 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ವೈಭವ ನಗರದ ರಸ್ತೆಗಳ ಅಭಿವೃದ್ಧಿಗೆ 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿರುವ ಲಕ್ಷ್ಮಿ ಹೆಬ್ಬಾಳಕರ್, ಭೂಮಿ ಪೂಜೆಯನ್ನು ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ದತ್ತಾ ಪಾಟೀಲ, ಸಿದ್ದರಾಯಿ ಬೆಳಗಾವಿ, ಮನೋಹರ್ ಬೆಳಗಾಂವ್ಕರ್, ಅಡಿವೆಪ್ಪ ಹತ್ತರಗಿ, ಬಂಡೆನವಾಜ್ ಸೈಯದ್, ಅಯೂಬ್ ಪಠಾಣ, ಶರೀಫ್ ಸನದಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು..
ಕ್ಷೇತ್ರದ ಕಂಗ್ರಾಳಿ ಬಿಕೆ ಗ್ರಾಮದ ಕಲ್ಮೇಶ್ವರ ನಗರ ಹಾಗೂ ವೈಭವ ನಗರಗಳ ಚರಂಡಿ ನಿರ್ಮಾಣದ ಸಲುವಾಗಿ 9 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಸ್ಥಳೀಯ ಜನಪ್ರತಿನಿಧಿಗಳು, ಇಸ್ಮಾಯಿಲ್ ದೇಸಾಯಿ, ಉಮೇಶ ನಾಯ್ಕ್, ಸಿದ್ದರಾಯಿ ಬೆಳಗಾವಿ, ಅಡಿವೆಪ್ಪ ಹತ್ತರಗಿ ಉಪಸ್ಥಿತರಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 14 ಲಕ್ಷ ರೂ,ಗಳ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಂಗನವಾಡಿ ಕೇಂದ್ರ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದಲ್ಲಿ ಗ್ರಾಮ ಪಂಚಾಯತ ಕಟ್ಟಡ ನಿರ್ಮಾಣದ ಸಲುವಾಗಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 75 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಲಾಗಿದ್ದು, ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಸ್ಥಳೀಯ ಜನಪ್ರತಿನಿಧಿಗಳು, ಯಲ್ಲಪ್ಪ ಗವಳಿ, ಜ್ಯೋತಿ ಪಾಟೀಲ, ಬಾಳು ಪಾಟೀಲ, ವಿಶಾಲ ಬೋಸ್ಲೆ, ಮನೋಹರ್ ಪಾಟೀಲ, ರಾಹುಲ ಪಾಟೀಲ, ಸದ್ದಾಂ ಮುಲ್ಲಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ