ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಮಾರ್ಚ್ 28ರವರೆಗೆ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯಭಾಗದಲ್ಲಿ ವಾಯುಭಾರ ಕುಸಿತವುಮ್ಟಾಗಿದ್ದು, ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಲು ಕಾರಣವಾಗಿದೆ.
ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆ ತಾಪಮಾನ ಹೆಚ್ಚಲಿದ್ದು, ಏಪ್ರಿಲ್, ಮೇ ತಿಂಗಳಿನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ 37 ಡಿಗ್ರಿ ಸೆಸ್ನಿಯಸ್ ವರೆಗೆ ತಲುಪಲಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಚಿಕ್ಕೋಡಿಯ 42 ಜನರಿಗೆ 50.40 ಲಕ್ಷ ರೂ ಪರಿಹಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ