Latest

ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತೆ ಬಂಗಾರದ ಬೆಲೆ ಶಾಕ್ ನೀಡಿದೆ. ನಿನ್ನೆಯಷ್ಟೇ ಇಳಿಕೆಯಾಗಿದ್ದ ಚಿನ್ನ-ಬೆಳ್ಳಿ ದರ ಇಂದು ಮತ್ತೆ ಏರಿಕೆಯಾಗಿದೆ.

ಇಂದು ದೇಶದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,310 ಆಗಿದೆ. ಮಹಾನಗರಗಳಲ್ಲಿ ಚಿನ್ನ ಬೆಳ್ಳಿ ದರ ಇಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,950 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಚಿನ್ನ 52,310 ರೂಪಾಯಿ ಆಗಿದೆ.

ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 48,310 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಹೈದರಾಬಾದ್- 47,950 ರೂ, ಪುಣೆ- 48,050 ರೂ ಆಗಿದೆ.

24 ಕ್ಯಾರೆಟ್ ಚಿನ್ನ ಚೆನ್ನೈ- 52,700 ರೂ, ಮುಂಬೈ- 52,310 ರೂ, ದೆಹಲಿ- 52,310 ರೂ, ಕೊಲ್ಕತ್ತಾ- 52,310 ರೂ, ಹೈದರಾಬಾದ್- 52,310 ರೂ, ಪುಣೆ- 52,350 ರೂ ಆಗಿದೆ.

ಇಂದು ದೇಶದಲ್ಲಿ ಬೆಳ್ಳಿ ದರ ಏರಿಕೆಯಾಗಿದ್ದು, ಕೆಜಿಗೆ 900 ರೂ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ದರ 72,800 ರೂ, ಚೆನ್ನೈ 72,800 ರೂ ನಿಗದಿಯಾಗಿದೆ.

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button