
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಭಯೋತ್ಪಾದಕ ಹೆಸರಲ್ಲಿ ಬಿಜೆಪಿ ಸೈನಿಕರನ್ನೆ ಹತ್ಯೆ ಮಾಡಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಕೊಂದಿದ್ದು ಬಿಜೆಪಿ. ಆರ್ ಡಿ ಎಕ್ ಬಾಂಬ್ ಬಂದಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಚುನಾವಣೆ ಬಂದಾಗ ಇವರಿಗೆ ಪಾಕಿಸ್ತಾನ ಸೈನಿಕರು ನೆನಪಾಗುತ್ತಾರೆ. ದೇಶದಲ್ಲಿ ಸರ್ಕಾರ ಸಿನಿಮಾ ಮಾಡುವ ಪರಿಸ್ಥಿತಿ ಬಂದಿದೆ ಎಂದು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ನೀವು ಸರ್ಕಾರ ಮಾಡುತ್ತಿರೋ?, ದನ ಕಾಯ್ತೀರೋ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.
ಬ್ರಿಟಿಷರಿಗೆ ಸಹಾಯ ಮಾಡಿದ್ದೇ ಬಿಜೆಪಿ ಹಾಗೂ ಆರ್ ಎಸ್ ಎಸ್. ಬಿಜೆಪಿಯವರು ಟಿಕೆಟ್ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ