ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸ್ವಾಮೀಜಿಗಳು ತಲೆ ಮೇಲೆ ಖಾವಿ ಬಟ್ಟೆ ಹಾಕ್ತಾರೆ ಅದನ್ನೂ ಪ್ರಶ್ನಿಸುತ್ತೀರಾ? ಎಂಬ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದಿದ್ದಾರೆ.
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನ ಎಂದು ಹೇಳಿದ್ದಾರೆ.
ಮತ್ತಷ್ಟು ಏರಿಕೆಯಾಯ್ತು ಚಿನ್ನ-ಬೆಳ್ಳಿ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ