Latest

ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಸಾವು

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕೆಲದಿನಗಳ ಹಿಂದೆ ತುಮಕೂರು ಜಿಲ್ಲೆಯ ಪಾವಗಡ ಬಳಿಯ ಪಳವಳ್ಳಿ ಕಟ್ಟೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಮಹೇಂದ್ರ (17) ಮೃತ ವಿದ್ಯಾರ್ಥಿ. ಮಾರ್ಚ್ 19ರಂದು ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೆ, ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇದೀಗ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬಸ್ ದುರಂತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ವಿದ್ಯಾರ್ಥಿ ಮಹೇಂದ್ರನಿಗೆ ತಲೆ ಹಾಗೂ ಬೆನ್ನು ಮೂಳೆಗೆ ಬಲವಾಗಿ ಪೆಟ್ಟು ಬಿದ್ದಿತ್ತು. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಸಿಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಪರಾಧಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button