Latest
SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ವ್ಯವಸ್ಥೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ 28ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ.
ಮಾರ್ಚ್ 28ರಿಂದ ಏ.11ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣಿಕಕ್ಕೆ ವ್ಯವಸ್ಥೆ ಮಾಡಿದೆ.
ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಪರೀಕ್ಷಾ ಕೇಂದ್ರದವರೆಗೂ ನಿಗಮದ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಕೆ.ಎಸ್.ಆರ್.ಟಿ.ಸಿ ತಿಳಿಸಿದೆ.




