ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರವಿ ಡಿ.ಚನ್ನಣ್ನನವರ್ ವಿರುದ್ಧ ಸಿಬಿಐ, ಇಡಿ ತನಿಖೆಗೆ ಆದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ರವಿ.ಡಿ.ಚನ್ನಣ್ಣವರ್ ವಿರುದ್ಧ ಅಕ್ರಮ ಆಸ್ತಿಗಳಿಕೆ, ಬೇನಾಮಿ ಹೆಸರಲ್ಲಿ ಜಮೀನು, ಪೋಷಕರ ಹೆಸರಲ್ಲೂ ಅಪಾರ ಆಸ್ತಿ ಖರೀದಿ ಸೇರಿದಂತೆ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಆದರೆ ಈ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ಅವರ ತಂದೆ-ತಾಯಿ ದ್ಯಾಮಪ್ಪ ಹಾಗೂ ರತ್ನವ್ವ, ನಮ್ಮದು ಅಕ್ರಮ ಆಸ್ತಿ ಅಲ್ಲ. 25 ವರ್ಷಗಳಿಂದ ನಮ್ಮ ಕುಟುಂಬಕ್ಕೆ 6 ಎಕರೆ ಪಿತ್ರಾರ್ಜಿತ ಆಸ್ತಿ ಇತ್ತು ಎಂದು ಹೇಳಿದ್ದರು. ಅಲ್ಲದೇ ಸ್ವಂತ ಪರಿಶ್ರಮದಿಂದ ಹಿರಿಯ ಮಗ ರವಿ ಚನ್ನಣ್ಣವರ್ ಐಪಿಎಸ್ ಅಧಿಕಾರಿಯಾಗಿದ್ದಾನೆ. ಕಿರಿಯ ಮಗ ರಾಘವೇಂದ್ರ ಚನ್ನಣ್ಣವರ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಐದು ಸ್ಥಳಗಳಲ್ಲಿರುವ ಆಸ್ತಿ ವಿವರ ಪ್ರಕಟಿಸಿದ್ದರು.
ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮಗೆ IT ಶಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ