ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೊಂಡೋತ್ಸವದ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಕಟ್ಟಡದ ಮೇಲೆ ನಿಂತು ಜನರು ಕೊಂಡೋತ್ಸವ ನೋಡುತ್ತಿದ್ದ ವೇಳೆ ಕಟ್ಟಡದ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ನಡೆದಿದೆ.
ಪುಟ್ಟಲಿಂಗಮ್ಮ ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸ ವೇಳೆ ಕೊಂಡೋತ್ಸವ ನೋಡಲೆಂದು ಹಳೆ ಕಟ್ಟಡದ ಮೇಲೆ ಗ್ರಾಮದ ಜನರು ನಿಂತಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಅಶ್ವಥಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಮಂಗಳಾರತಿ ನಿಲ್ಲಿಸಿ; ಕಲ್ಲಡ್ಕ ಪ್ರಭಾಕರ್ ಭಟ್ ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ