ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಪರಿಷತ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸಲಾಗುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳಬಾರದು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಉತ್ತರ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಾಲಾ ಮಕ್ಕಳ ಸ್ಕಾಲರ್ ಶಿಪ್, ಉನ್ನತ ಶಿಕ್ಷಣವನ್ನು ಯಾವತ್ತೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿ ವೇತನಕ್ಕಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾದಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳ ಸ್ಕಾಲರ್ ಶಿಪ್ ಗೆಂದೆ 100 ಕೋಟಿ ಅನುದಾನ ಮಂಜೂರು ಮಾಡಿದ್ದೇನೆ. ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸಲ್ಲ. ಮಕ್ಕಳ ವಿಷಯದಲ್ಲಿ ತಾರತಮ್ಯ ಮಾಡದೇ ಸ್ಕಾಲರ್ ಶಿಪ್ ಒದಗಿಸಲಾಗುತ್ತದೆ. ಆದರೆ ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ. ಅದನ್ನು ಬಿಟ್ಟು ಅಲ್ಪಸಂಖ್ಯಾತರ ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪಠ್ಯದಿಂದ ಟಿಪ್ಪು ವಿಚಾರ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ